ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಕೊಕ್ಕಡದಲ್ಲಿ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಾಚಾರ ಸಭೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕಳೆಂಜ ಗ್ರಾಮದ ಕೃಷ್ಣಕುಮಾರ್ ಕಾರ್ಯತ್ತಡ್ಕ, ಗುರುನಾಥ್ ಕಾರ್ಯತಡ್ಕ, ಪಟ್ರಮೆ ಗ್ರಾಮದ ಲೀಯೋ ಪಟ್ಟೂರು ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.