ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 1,27,952 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1,059ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 5,01,143ಕ್ಕೆ ಏರಿಕೆಯಾಗಿದೆ. ಒಂದೇ ದಿನ 2,30,814ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,02,47,902ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 13,31,648 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.7.98ರಷ್ಟಿದೆ.