Saturday, June 7, 2025

ರಾಜ್ಯದಲ್ಲಿ ಗುರುವಾರದಂದು ಪತ್ತೆಯಾದ 107 ಹೊಸ ಒಮಿಕ್ರಾನ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳು ಹೆಚ್ಚುತ್ತಲೇ ಹೋಗುತ್ತಿದ್ದು, ಇದೀಗ ಕೊವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿದೆ. ಗುರುವಾರದಂದು ರಾಜ್ಯದಲ್ಲಿ 107 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.

ಇದೀಗ ರಾಜ್ಯದಲ್ಲಿ ಓಮಿಕ್ರಾನ್ ಸಕ್ರಿಯ ಪ್ರಕರಣಗಳ ಸಂಖ್ಯೆ 333 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. ಜನವರಿ 6 ರಂದು 107 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕ್ರಮವನ್ನು ಕೈಗೊಂಡಿದೆ. ಸರ್ಕಾರವು ಬೆಂಗಳೂರಿಗೆ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಪಡಿಸಿದೆ. ವಾರಾಂತ್ಯ ಹಾಗೂ ರಾತ್ರಿಯ ಕರ್ಫ್ಯೂ ಇರಲಿದೆ. ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles