ಮೂಡುಬಿದಿರೆ: ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲು ಒಪ್ಪದ 14 ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆದ ಘಟನೆ ಮೂಡುಬಿದಿರೆ ತಾಲೂಕಿನ ಮಹಾವೀರ ಕಾಲೇಜಿನಲ್ಲಿ ಗುರುವಾರ ನಡೆದಿದೆ.
ಇಂದು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭಗೊಂಡ ಹಿನ್ನಲೆಯಲ್ಲಿ ಕಾಲೇಜಿನ 14 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆಗೆ ಬಂದಿದ್ದಾರೆ. ಅವರನ್ನು ಪೊಲೀಸರು ಕಾಲೇಜಿನ ಗೇಟಿನ ಬಳಿ ತಡೆದಿದ್ದು, ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಪೊಲೀಸರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿನಿಯರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಬೆಳಿಗ್ಗೆಯಿಂದ 10.45ರ ವರೆಗೆ ಕಾಲೇಜಿನ ಗೇಟಿನ ಬಳಿ ಕಾದು ನಿಂತು ಮನೆಗೆ ಹಿಂತಿರುಗಿದ್ದಾರೆ.
ಕಾಲೇಜಿನ 14 ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ಒಪ್ಪಗೆ ಗೈರು ಹಾಜರಾಗಿದ್ದರೆ, 4 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೇ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.