ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 14,950 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 53 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 40,599 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 1,23,098 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದೆ. ಬೆಂಗಳೂರಿನಲ್ಲಿಂದು 6,039 ಜನರಿಗೆ ಸೋಂಕು ದೃಢಪಟ್ಟಿದ್ದು, 15 ಜನರು ಮೃತಪಟ್ಟಿದ್ದಾರೆ. ಇದುವರೆಗೆ ರಾಜ್ಯದಲ್ಲಿ 38,75,724 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 39,250 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.