ಉಡುಪಿ: ಮಾ. 28ರಿಂದ ಏ. 11ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉಡುಪಿ ಹಿನ್ನಲೆ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆಗಳು ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8ರಿಂದ ಸಂಜೆ 6ರ ವರಗೆ ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ.