ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ನಾಳೆಯಿಂದ ಮೂರು ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಂಗಳವಾರ ರಾಜ್ಯದ ಶಿವಮೊಗ್ಗ, ಉಡುಪಿ, ಬಾಗಲಕೋಟೆಯಲ್ಲಿ ಹಿಜಾಬ್ ಕೇಸರಿ ವಿವಾದ ಸಂಘರ್ಷ ತಾರಕಕ್ಕೇರಿತ್ತು. ಜೊತೆಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಕಾರಣ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.