Sunday, June 8, 2025

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಕೊರೊನಾ ಪಾಸಿಟಿವ್, 657 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 58,077 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಈವರೆಗೆ 4,25,36,137 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 657 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5,07,208 ಕ್ಕೆ ಏರಿಕೆಯಾಗಿದೆ. ಇನ್ನು, ಕಳೆದ 24 ಗಂಟೆಗಳಲ್ಲಿ 1,50,407 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,13,31,158ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 6,97,802 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.3.89ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles