Sunday, June 8, 2025

ಹೈಕೋರ್ಟ್‌ ತೀರ್ಪು ಕಡೆಗಣಿಸಿ 9 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರು

ಕಾಪು: ತರಗತಿಯಲ್ಲಿ ಹಿಜಾಬ್ ಧರಿಸುವುದಕ್ಕೆ‌ ಅವಕಾಶವಿಲ್ಲ ಎಂಬ ಹೈಕೋರ್ಟ್ ತೀರ್ಪು ನೀಡಿದ ನಂತರವೂ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 9 ಮಂದಿ ವಿದ್ಯಾರ್ಥಿನಿಯರು ಬುಧವಾರ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ.

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 9 ಮಂದಿ ವಿದ್ಯಾರ್ಥಿನಿಯರು ಇಂದು ಬೆಳಗ್ಗೆ ಹಿಜಾಬ್ ಧರಿಸಿ ಕಾಲೇಜಿಗೆ‌ ಆಗಮಿಸಿದ್ದಾರೆ. ಪ್ರಾಂಶುಪಾಲರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೇ ಕಾಲೇಜಿನಿಂದ ಹಿಂತೆರಳಿದ್ದಾರೆ.

ಕಾಲೇಜಿನಲ್ಲಿ 17ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದು ಈ ಪೈಕಿ ನಾಲ್ಕು ಮಂದಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದಾರೆ. ಉಳಿದ 9 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿ, ತರಗತಿ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾದ ವಿದ್ಯಾರ್ಥಿನಿಯರ ಮನವೊಲಿಸಲು ಪ್ರಯತ್ನಿಸಲಾಯಿತು. ಆದರೂ ಯಾವುದಕ್ಕೂ ಒಪ್ಪದ ಕಾರಣ ಅವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles