ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಖಾಲಿ ಇರುವಂತಹ 70 ‘ಕರ್ನಾಟಕ ವಿಶೇಷ ಮೀಸಲು ಸಬ್‌ಇನ್ಸ್‌ಪೆಕ್ಟರ್’ (ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ) ಹುದ್ದೆಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟ ಮಾಡಿದೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಸ್ಪರ್ಧಾತ್ಮಕ ಪರೀಕ್ಷೆಗೆ ಯುಜಿಸಿ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದವರು ಅರ್ಹರಾಗಿರುತ್ತಾರೆ.
ಜನವರಿ 18, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹತ್ತಿರದ ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಯ ಮೂಲಕಅರ್ಜಿ ಶುಲ್ಕವನ್ನು ಪಾವತಿಸಬಹುದು. ಜನವರಿ 20, 2022 ಶುಲ್ಕ ಪಾವತಿಸಲು ಕೊನೆಯ ದಿನಾಂಕವಾಗಿದೆ.ಅರ್ಜಿಯನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-22943346 ಅನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿಯ ಶುಲ್ಕವು ಸಾಮಾನ್ಯ ವರ್ಗ. ಪ್ರವರ್ಗ 2(ಎ), 2(ಬಿ) 3(ಎ) 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ₹500. ಎಸ್‌ಸಿ/ ಎಸ್‌ಟಿ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹ 250 ಆಗಿರುತ್ತದೆ.
ಅರ್ಜಿ ಸ್ವೀಕರಿಸುವ ಕೊನೆ ದಿನಾಂಕದ ವೇಳೆಗೆ ಸಾಮಾನ್ಯ ವರ್ಗದ ಅಭ್ಯರ್ಥಿಗೆ ಕನಿಷ್ಠ 21, ಗರಿಷ್ಠ 26 ವರ್ಷ ಮೀರಿರಬಾರದು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಕನಿಷ್ಠ 21, ಗರಿಷ್ಠ 28 ವರ್ಷ ಮೀರಿರಬಾರದು.