ಉಡುಪಿ: ಪ್ರಸಕ್ತ ಸಾಲಿನ ಎಸ್.ಸಿ.ಎಸ್.ಪಿ ಅನುದಾನದಡಿ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ ಚರ್ಮ ಕುಶಲಕರ್ಮಿಗಳಿಗೆ 2 ತಿಂಗಳ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ಕೋಟ ಮತ್ತು ಉಡುಪಿಯಲ್ಲಿ ಈ ತರಬೇತಿಯನ್ನು ಆಯೋಜಿಸಲಾಗುತ್ತಿದೆ. ತರಬೇತಿಗೆ 18 – 50 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮಾಸಿಕ 6,000 ರೂ. ಶಿಷ್ಯವೇತನವನ್ನು ತರಬೇತಿ ಅವಧಿಯಲ್ಲಿ ನೀಡಲಾಗುತ್ತದೆ. ಪ್ರಮಾಣ ಪತ್ರದ ಜೊತೆಗೆ 20,000 ರೂ.ಗಳ ಹೊಲಿಗೆ ಯಂತ್ರವನ್ನು 2 ತಿಂಗಳ ತರಬೇತಿ ಪೂರೈಸಿದ ಅಭ್ಯರ್ಥಿಗಳಿಗೆ ಉಚಿತವಾಗಿ ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂರವಾಣಿ ಸಂಖ್ಯೆ 6362891017 ಯ ಮೂಲಕ ಸಂಪರ್ಕಿಸಬಹುದಾಗಿದೆ.