ರಿಷಬ್ ಶೆಟ್ಟಿ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘ಗರುಡಗಮನ ವೃಷಭ ವಾಹನ’ ಚಿತ್ರವು ನವೆಂಬರ್ 19ರಂದು ಬಿಡುಗಡೆಗೊಂಡಿತ್ತು. ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ರಾಜ್ ಬಿ ಶೆಟ್ಟಿ ಈ ಸಿನಿಮಾದಲ್ಲಿ ಫುಲ್ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಚಿತ್ರತಂಡವು ಇತ್ತೀಚೆಗೆ ‘ಗರುಡಗಮನ ವೃಷಭ ವಾಹನ’ ಚಿತ್ರದ ಓಟಿಟಿ ಹಕ್ಕುಗಳನ್ನು ಜೀ5 ಸಂಸ್ಥೆ ಪಡೆದುಕೊಂಡಿದೆ ಎಂಬುದನ್ನು ತಿಳಿಸಿತ್ತು. ಇದೀಗ ಈ ಚಿತ್ರವು ಜನವರಿ 15ರಂದು ಜೀ5 ನಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ಮಾಹಿತಿಯನ್ನು ನೀಡಿದೆ. ರಿಷಬ್ ಶೆಟ್ಟಿ ಅವರು ಈ ಕುರಿತ ಮಾಹಿತಿಯಿರುವ ಟ್ವೀಟ್ಗಳನ್ನು ರೀಟ್ವೀಟ್ ಮಾಡುವ ಮೂಲಕ ಓಟಿಟಿಯಲ್ಲಿ ಚಿತ್ರ ಬಿಡುಗಡೆಯ ದಿನಾಂಕವನ್ನು ಖಚಿತಪಡಿಸಿದ್ದಾರೆ. ಇನ್ನು ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ, ರಿಷಬ್ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ ಮೊದಲಾದವರು ನಟಿಸಿದ್ದಾರೆ.