ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಅವರು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆ ನೀಡಿಕೆ ಸಂಪೂರ್ಣವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 97.5% ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಬೆಂಗಳೂರು ನಗರ, ಗದಗ, ವಿಜಯಪುರ, ಬೀದರ್, ಬಾಗಲಕೋಟೆ, ಧಾರವಾಡ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಡಗು ಈ 9 ಜಿಲ್ಲೆಗಳಲ್ಲಿ 100% ಮೊದಲ ಡೋಸ್ ಸಂಪೂರ್ಣವಾಗಿದೆ. ದಾವಣಗೆರೆ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಶೇ.99 ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಎಲ್ಲಾ ಆರೋಗ್ಯ ಕಾರ್ಯಕರ್ತರ ಹಾಗೂ ಜಿಲ್ಲಾಡಳಿತದ ಪರಿಶ್ರಮಕ್ಕೆ ಅಭಿನಂದನೆಯನ್ನು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.