Wednesday, June 18, 2025

ಒಂದು ವಾರದಲ್ಲಿ 2 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆ

15-18 ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಪ್ರಾರಂಭಿಸಿ ಒಂದು ವಾರ ಆಯಿತು. ಈ ಒಂದು ವಾರದೊಳಗೆ 2 ಕೋಟಿ ಮಕ್ಕಳು ತಮ್ಮ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಟ್ವೀಟ್ ಮಾಡಿ ಲಸಿಕೆ ಪಡೆದ ಮಕ್ಕಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಚಿವ ಮಾಂಡವಿಯಾ ಲಸಿಕೆ ಅಭಿಯಾನ ಆರಂಭವಾದ ಒಂದು ವಾರದೊಳಗೆ 15-18 ವಯಸ್ಸಿನ 2 ಕೋಟಿಗೂ ಹೆಚ್ಚು ಮಕ್ಕಳು ಕೊರೋನಾ ಲಸಿಕೆಯ ತಮ್ಮ ಮೊದಲ ಡೋಸ್ ಅನ್ನು ಪಡೆದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ತಾತ್ಕಾಲಿಕ ವರದಿಗಳ ಪ್ರಕಾರ 150.61 ಕೋಟಿ ಜನರು ದೇಶದಲ್ಲಿ ಲಸಿಕೆ ಪಡೆದಿದ್ದಾರೆ. ಹಾಗೂ 90 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ಕಳೆದ 24 ಗಂಟೆಗಳಲ್ಲಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ದೇಶದ 91% ವಯಸ್ಕ ಜನಸಂಖ್ಯೆ ತಮ್ಮ ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಹಾಗೂ 60% ಕ್ಕಿಂತ ಹೆಚ್ಚು ಜನರು ತಮ್ಮ ಎರಡೂ ಡೋಸ್‌ಗಳನ್ನ ತೆಗೆದುಕೊಂದು ಪೂರ್ಣವಾಗಿ ವ್ಯಾಕ್ಸಿನೇಟ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles