ದಿನದಿಂದ ದಿನಕ್ಕೆ ಭಾರತದಲ್ಲಿ ಸ್ಮಾರ್ಟ್‌ಫೋನ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆಯಾಗುತ್ತಿವೆ. ಜನವರಿಯು ಹೊಸ ವರ್ಷದ ಮೊದಲ ತಿಂಗಳಾಗಿರುವುದರಿಂದ ಹೊಸ ಹೊಸ ಮೊಬೈಲ್ ಗಳು ಹಾಗೂ ಹೊಸ ಹೊಸ ಆಫರ್ ಗಳನ್ನು ಜನರಿಗೆ ನೀಡಲಾಗುತ್ತಿದೆ. ವಾರದಲ್ಲಿ ಕನಿಷ್ಟ ಎಂದರೂ 2 ರಿಂದ 3 ಫೋನ್ ಗಳು ಬಿಡುಗಡೆಯಾಗುತ್ತವೆ. ಕಡಿಮೆ ಬೆಲೆಗೆ ಆಕರ್ಷಕ ಫೀಚರ್ ಹೊಂದಿರುವ ಫೋನ್ ಖರೀದಿ ಮಾಡಬೇಕೆನ್ನುವವರು ಈ ಕೆಳಗಿನ ಫೋನ್ ಗಳನ್ನು ಖರೀದಿ ಮಾಡಬಹುದಾಗಿದೆ.
ಐಕ್ಯೂ Z5: ಪ್ರಸ್ತುತ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್ 23,990 ಕ್ಕೆ ಸಿಗಲಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 6.67 ಇಂಚಿನ ಫುಲ್-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರುತ್ತದೆ. ಇದರ ಪ್ರೊಸೆಸರ್ ಸ್ನಾಪ್‌ಡ್ರಾಗನ್ 778G SoC ಆಗಿದೆ. ಇದು ಆಂಡ್ರಾಯ್ಡ್ 11. ಆಧಾರಿತ ಒರಿಜಿನ್ ಓಎಸ್ 1.0 ಸಹಾಯದೊಂದಿಗೆ ಕೆಲಸಮಾಡುತ್ತದೆ. ಇದರಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. 5,000mAh ಬ್ಯಾಟರಿ ಸಾಮರ್ಥ್ಯವಿದೆ.
ಶವೋಮಿ ಎಂಐ 10i: ಪ್ರಸ್ತುತ 6GB RAM ಮತ್ತು 64GBನ ಸ್ಮಾರ್ಟ್‌ಫೋನ್ ಗೆ 20,999, 6GB RAM ಮತ್ತು 128GBನ ಸ್ಮಾರ್ಟ್‌ಫೋನ್ ಗೆ 21,999 ಹಾಗೂ 8GB RAM ಮತ್ತು 128GB ಸ್ಮಾರ್ಟ್‌ಫೋನ್ ಗೆ 23,999 ಆಗಿದೆ. ಇದರ ಡಿಸ್‌ಪ್ಲೇ 6.67 ಇಂಚಿನಷ್ಟಿದೆ. ಇದರ ಪ್ರೊಸೆಸರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಆಗಿದೆ. ಮುಖ್ಯ ಕ್ಯಾಮೆರಾವು 108 ಮೆಗಾಪಿಕ್ಸೆಲ್ ಸೆನ್ಸಾರ್, ಹಾಗೂ 5820mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವಿದೆ.
ರಿಯಲ್‌ಮಿ X7 5G: ಪ್ರಸ್ತುತ ಈ ಸ್ಮಾರ್ಟ್‌ಫೋನ್19,999 ಕ್ಕೆ ಸಿಗಲಿದ್ದು, 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದರ ಪ್ರೊಸೆಸರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಆಗಿದೆ. ಇದು ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಸಹಾಯದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಇದೆ.
ಮೋಟೋರೊಲಾ ಎಡ್ಜ್ 20 ಫ್ಯೂಷನ್: ಪ್ರಸ್ತುತ 6GB ಮತ್ತು 128GBನ ಸ್ಮಾರ್ಟ್‌ಫೋನ್ ಗೆ 21,499, ಹಾಗೂ 8GB ಮತ್ತು 128GBನ ಸ್ಮಾರ್ಟ್‌ಫೋನ್ ಗೆ 22,999 ಆಗಿದೆ. ಇದು 6.7-ಇಂಚಿನ ಫುಲ್ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಆಗಿದೆ. ಇದರ ಪ್ರೊಸೆಸರ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಆಗಿದೆ. ಇದು ಆಂಡ್ರಾಯ್ಡ್ 11 ಸಹಾಯದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಒನ್‌ಪ್ಲಸ್ ನಾರ್ಡ್ CE 5G: ಪ್ರಸ್ತುತ ಈ ಸ್ಮಾರ್ಟ್‌ಫೋನ್ 24,999 ಗೆ ಖರೀದಿಸಬಹುದಾಗಿದೆ. 6.43-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದರ ಪ್ರೊಸೆಸರ್ ಆಕ್ಟಾ-ಕೋರ್-ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಆಗಿದೆ. ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಸಹಾಯದೊಂದಿಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್, ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸೆಲ್ ಸೆನ್ಸಾರ್ ಸೋನಿ ಐಎಂಎಕ್ಸ್ 471 ಅನ್ನು ಹೊಂದಿದೆ. ಹಾಗೂ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ.