ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಜನವರಿ 15 ರ ವರೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.