Sunday, June 8, 2025

ಬೂಸ್ಟರ್ ಡೋಸ್ ಲಸಿಕೆ ನೀಡಿಕೆಯಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.  

ಬೂಸ್ಟರ್ ಡೋಸ್ ಲಸಿಕೆ ನೀಡಿಕೆಯಲ್ಲಿ ಗುಜರಾತ್ ಮೊದಲ ಸ್ಥಾನವನ್ನು, ಆಂಧ್ರಪ್ರದೇಶ ಎರಡನೆ ಸ್ಥಾನವನ್ನು, ರಾಜಸ್ಥಾನ ಮೂರನೇ ಸ್ಥಾನವನ್ನು ಹಾಗೂ ಕರ್ನಾಟಕವು ನಾಲ್ಕನೇ ಸ್ಥಾನವನ್ನು ಪಡೆದಿದೆ. ರಾತ್ರಿ 8.30 ರ ಒಳಗೆ ಕರ್ನಾಟಕದಲ್ಲಿ 81,728 ಬೂಸ್ಟರ್ ಡೋಸ್‌ಗಳನ್ನು ನೀಡಲಾಗಿದೆ. 5,281 ಜನ ಆರೋಗ್ಯ ಕಾರ್ಯಕರ್ತರಿಗೆ, 2,463 ಜನ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟ 3,931 ಜನರಿಗೆ ಬೂಸ್ಟರ್ ಡೋಸ್‌ ನೀಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ1, 03, 163 ಆರೋಗ್ಯ ಕಾರ್ಯಕರ್ತರಿಗೆ, 40,000 ಮುಂಚೂಣಿ ಕಾರ್ಯಕರ್ತರಿಗೆ, 2,87,802 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಕೋವಿನ್ ಪೋರ್ಟಲ್ ಪ್ರಕಾರ ಬೂಸ್ಟರ್ ಡೋಸ್ ನೀಡಬೇಕಾಗಿದೆ. ಕೋವಿಡ್-19 ನಿಂದ ಸುರಕ್ಷಿತರಾಗಬೇಕಾದರೆ ಪ್ರತಿಯೊಬ್ಬರು ಲಸಿಕೆ ಪಡೆಯಬೇಕು. ಶೇಕಡಾ 100 ರಷ್ಟು ಮೊದಲ ಡೋಸ್ ಅನ್ನು ಜನವರಿ 31 ರ ವೇಳೆಗೆ ಪೂರ್ಣಗೊಳಿಸುವ ಹಾಗೂ ಫೆಬ್ರವರಿ ವೇಳೆಗೆ ನಾವು ಎರಡನೇ ಡೋಸ್ ವ್ಯಾಪ್ತಿಯನ್ನೂ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಿದರು. 

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅವರು ಎರಡನೇ ಡೋಸ್‌ ಪಡೆದ ಒಂಬತ್ತು ತಿಂಗಳ ನಂತರ ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು. ಶೇಕಡ 50 ರಷ್ಟು 15-17 ಮಕ್ಕಳಿಗೆ ಮೊದಲ ಡೋಸ್ ನೀಡಲಾಗಿದೆ. ಮೂರನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನರು ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಿದರು

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles