ಬೆಂಗಳೂರು:ದ್ವಿಚಕ್ರವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ(೬) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಗುರುವಾರ ಸಂಜೆ ನಡೆದಿದೆ.
ತಾಯಿ ಅಮೃತಾ ನಾಯ್ಡು ಹಾಗೂ ಮಗಳು ಸಮನ್ವಿ ದ್ವಿಚಕ್ರವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಆರು ವರ್ಷದ ಬಾಲಕಿ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಟಿ ಅಮೃತಾ ನಾಯ್ಡು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅಮೃತಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಬಾಲಕಿಯ ಮೃತದೇಹವನ್ನು ಮರೋಣತ್ತರ ಪರೀಕ್ಷೆಗಾಗಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ.
ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಭೀಕರ ರಸ್ತೆ ಅಪಘಾತ:ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಸಾವು
Subscribe
Login
0 Comments