Sunday, June 8, 2025

ಭಾರತದಲ್ಲಿ ಕೊರೊನಾ ಸ್ಫೋಟ: ಕಳೆದ ೨೪ಗಂಟೆಗಳಲ್ಲಿ ೨.೬೪ಲಕ್ಷ ಮಂದಿಗೆ ಕೋವಿಡ್….

ಭಾರತ:ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಒಂದೆಡೆ ಸರ್ಕಾರ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದರೆ, ಇನ್ನೊಂದೆಡೆ ಕೋವಿಡ್ ಸೋಂಕಿತರ ಸಂಖ್ಯೆಯೂ ಕೂಡ ಉತ್ತುಂಗಕ್ಕೇರುತ್ತಿದೆ. ಭಾರತದಲ್ಲಿ ಕಳೆದ ೨೪ಗಂಟೆಗಳಲ್ಲಿ ೨,೬೪,೨೦೨ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ ೧೨,೭೨,೦೭೩ಕ್ಕೆ ಏರಿಕೆಯಾಗಿದೆ.


ಕೊರೊನಾ ಸೋಂಕಿಗೆ ದೇಶದಲ್ಲಿ ಒಂದೇ ದಿನ ೩೧೫ಮಂದಿ ಸಾವಿಗೀಡಾಗಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ ೪,೮೫,೩೫೦ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ೨೪ಗಂಟೆಗಳಲ್ಲಿ ೧,೦೯,೩೪೫ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ೧೨,೭೨,೦೭೩ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‌ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ ನಿನ್ನೆಯ ಕೋವಿಡ್ ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಇಂದು ಶೇ.೬.೭ರಷ್ಟು ಪ್ರಮಾಣದಲ್ಲಿ ಹೆಚ್ಚಳ ಉಂಟಾಗಿದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯಗಳ ಪೈಕಿ ಟಾಪ್ ೫ಸ್ಥಾನದಲ್ಲಿ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ ರಾಜ್ಯಗಳಿದ್ದು, ಕೊರೊನಾ ತಡೆಗೆ ಈ ರಾಜ್ಯಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles