Sunday, June 8, 2025

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,82,970 ಜನರಿಗೆ ಕೊರೋನಾ ಪಾಸಿಟಿವ್

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. 2,82,970 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದೆ. 441 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ 18,31,000 ಸಕ್ರಿಯ ಪ್ರಕರಣಗಳಗಳಿದ್ದು, 1,88,157 ಜನರು ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ದೇಶದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುವುದರ ಜೊತೆಗೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಇದುವರೆಗೆ ದೇಶಾದ್ಯಂತ 8,961 ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದ 28 ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. ಇದುವರೆಗೆ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles