Sunday, June 8, 2025

ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಹೆಚ್ಚುತ್ತಿದೆ ಕೊರೋನಾ ಸೋಂಕು

ಉಡುಪಿ: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹಾಗೂ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಶಾಲಾ, ಕಾಲೇಜುಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶೀತ, ಜ್ವರದಿಂದ ಬಳಲುತ್ತಿದ್ದಾರೆ. ಹಾಗೂ ಇವರಲ್ಲಿ ಕೊರೋನಾ ಸೋಂಕು ದೃಢಪಡುತ್ತಿದೆ. ಈಗಾಗಲೇ ರಾಜ್ಯದ 1-10ನೇ ತರಗತಿಯ 6,826 ವಿದ್ಯಾರ್ಥಿಗಳಿಗೆ ಹಾಗೂ 1,819 ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಉಡುಪಿ ಜಿಲ್ಲೆಯಲ್ಲಿ 1,600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಸುಮಾರು 25 ವಿದ್ಯಾರ್ಥಿಗಳಿಗೆ, 5-10 ವರ್ಷದ 90 ವಿದ್ಯಾರ್ಥಿಗಳಿಗೆ , 10-15 ವರ್ಷದ 360 ವಿದ್ಯಾರ್ಥಿಗಳಿಗೆ, 15-20 ವರ್ಷದ 650 ವಿದ್ಯಾರ್ಥಿಗಳಿಗೆ ಮತ್ತು 20-25 ವರ್ಷದ 600 ವಿದ್ಯಾರ್ಥಿಗಳಿಗೆ ಸೇರಿದಂತೆ 12 ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇನ್ನು ದ.ಕ.ದಲ್ಲಿ ಸುಮಾರು 150 ವಿದ್ಯಾರ್ಥಿಗಳಿಗೆ ಹಾಗೂ 30 ಶಿಕ್ಷಕರಿಗೆ ಸೋಂಕು ದೃಢಪಟ್ಟಿದೆ.

ಮಕ್ಕಳಲ್ಲಿ ಕೊರೋನಾ ಸೋಂಕಿನ ಕುರಿತು ಮಾಹಿತಿಯನ್ನು ಪಡೆಯಲಾಗುತ್ತಿದೆ. ನಾವು ಮಾಡುತ್ತಿರುವ ಸೋಂಕಿನ ಪರೀಕ್ಷೆ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಪಾಸಿಟಿವಿಟಿ ದರದಲ್ಲಿ ಹೆಚ್ಚು ವ್ಯತ್ಯಾಸ ಉಂಟಾಗಿಲ್ಲ. ಆದರೂ ವಿಶೇಷ ಜಾಗೃತಿಯೊಂದಿಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಅಭಿಯಾನ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles