ಮಂಗಳೂರು: ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ಕಾರು ಚಾಲಕನನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ.
ಮಂಗಳೂರಿನಿಂದ ಭಟ್ಕಳಕ್ಕೆ ರೋಗಿಯನ್ನು ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ಗೆ ಈತ ದಾರಿ ಕೊಡದೆ ಸುಮಾರು 40 ಕಿಲೋ ಮೀಟರ್ ಸತಾಯಿಸಿದ್ದಾನೆ. ಪೊಲೀಸರು ಕಾರು ಚಾಲಕನನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಐಪಿಸಿ ಸೆಕ್ಷನ್ 279, 184 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತನನ್ನು ಮೊನಿಷ್ ರಹ್ಮಾನ್ ಎಂದು ಗುರುತಿಸಲಾಗಿದ್ದು, ಆರೋಪಿಯ ವಿರುದ್ಧ ಸಂಚಾರ ಉತ್ತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.