Sunday, June 8, 2025

ಚೊಚ್ಚಲ ಮಗುವನ್ನು ಸ್ವಾಗತಿಸಿದ ಪ್ರಿಯಾಂಕ ಚೋಪ್ರಾ-ನಿಕ್ ದಂಪತಿ

ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮತ್ತು ನಿಕ್ ಜೋನಾಸ್ ದಂಪತಿ ಶುಕ್ರವಾರದಂದು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದುಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿರುವ ಇವರು ತಮ್ಮ ಮೊದಲ ಮಗುವನ್ನು ಸಂತಸದಿಂದ ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.


ಈ ಸಂತಸದ ಸಂದರ್ಭದಲ್ಲಿ “ನಾವು ಮತ್ತು ನಮ್ಮ ಕುಟುಂಬ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಇಚ್ಛಿಸುತ್ತೇವೆ. ಹಾಗೆಯೇ, ಬಾಡಿಗೆ ತಾಯಿಯ ಮೂಲಕ ಪಡೆದ ನಮ್ಮ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಹೇಳಲು ಅತೀವ ಸಂತೋಷವಾಗುತ್ತಿದೆ”. ಎಂದು ದಂಪತಿಗಳಿಬ್ಬರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಸಂಗತಿಯನ್ನು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles