Sunday, June 8, 2025

ಉಡುಪಿಯಲ್ಲಿ ಒಂದೇ ದಿನ 1018 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 4 ಮಂದಿ ಸಾವು

ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಉಡುಪಿಯಲ್ಲಿ 1018 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 84,804 ಕ್ಕೆ ಏರಿಕೆಯಾಗಿದೆ.


ಇನ್ನು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ 4 ಮಂದಿ ಮೃತಪಟ್ಟಿದ್ದು ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 495 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಂದೇ ದಿನ 281 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 78,484ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಸದ್ಯ 5825 ಕೊರೊನಾ ಸಕ್ರಿಯಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‌ನಲ್ಲಿ ಮಾಹಿತಿಯನ್ನು ಬಿಡುಗಡೆ ಮಾಡಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles