ಬೆಂಗಳೂರು: ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು 165 ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದರೂ ಇಂದು ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.