Saturday, June 7, 2025

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಬಿಎಸ್‌ಎಫ್‌ನಲ್ಲಿ 2700 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF)ನ ಖಾಲಿ ಇರುವ 2700 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಬಿಎಸ್‌ಎಫ್ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ನೇಮಕಾತಿಯು ಭೌತಿಕ ಗುಣಮಟ್ಟದ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಲಿಖಿತ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಈ ಹುದ್ದೆಗೆ ಜನವರಿ 16 ರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಮಾರ್ಚ್ 1 ಕೊನೆಯ ದಿನಾಂಕವಾಗಿದೆ. ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಪುರಷರ ವಿಭಾಗದಲ್ಲಿ 2,651 ಹುದ್ದೆಗಳು, ಮಹಿಳೆಯರ ವಿಭಾಗದಲ್ಲಿ 137 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು https://rectt.bsf.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles