Sunday, June 8, 2025

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ:ಉಡುಪಿ ಜಿಲ್ಲಾ ಉಸ್ತುವರಿಯಾಗಿ ಎಸ್.ಅಂಗಾರ, ದ.ಕ ಸುನೀಲ್, ಉ.ಕ ಕೋಟ ಶ್ರೀನಿವಾಸ್

ಉಡುಪಿ:ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಇದೀಗ ತಕ್ಷಣಕ್ಕೆ ಜಾರಿಯಾಗುವಂತೆ ಮುಂದಿನ ಆದೇಶದವರೆಗೆ 28 ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಎಸ್.ಅಂಗಾರ ಮತ್ತು ಸುನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನೇಮಕ ಮಾಡಿರುವುದಾಗಿ ರಾಜ್ಯ ಸರ್ಕಾರದ ಸಚಿವಾಲಯ ಆದೇಶ ಹೊರಡಿಸಿದೆ.


ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆದೇಶದಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಬಿ.ಎನ್ ಸುಮತಿರವರು ಪ್ರಕಟಣೆ ಹೊರಡಿಸಿದ್ದು, ಅದರಂತೆ ರಾಜ್ಯ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಇಂಧನ ಹಾಗೂ ಕನ್ನಡ ಸಂಸ್ಕೃತ ಇಲಾಖೆ ಸಚಿವ ಸುನೀಲ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles