ನವದೆಹಲಿ: ಜನವರಿ 26 ರಂದು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶಾದ್ಯಂತ 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜನವರಿ 25 ರ ಮಂಗಳವಾರ ಸಂಜೆ 7 ಗಂಟೆಗೆ ದೇಶವನ್ನುದ್ದೇಶಿಸಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.
ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಮಾಡಲಿರುವ ಭಾಷಣವನ್ನು ದೂರದರ್ಶನದ ಎಲ್ಲಾ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಭಾಷಣದ ನೇರಪ್ರಸಾರವನ್ನು ಡಿಡಿ ನ್ಯೂಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿಯೂ ಕೂಡ ವೀಕ್ಷಿಸಬಹುದಾಗಿದೆ.
ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ಬಾರಿಯೂ ಕೂಡ ಗಣರಾಜ್ಯೋತ್ಸವವನ್ನು ಸರಳವಾಗಿ ಸಾಂಕೇತಿಕವಾಗಿ ನಡೆಸಲಾಗುತ್ತದೆ. ಜನವರಿ 26 ರಂದು ರಾಜ್‌ಪಥ್‌ನಲ್ಲಿ ಗಣರಾಜ್ಯೋತ್ಸವದ ಆರಂಭದಿಂದ ಅಂತ್ಯದವರೆಗಿನ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ದೇಶಾದ್ಯಂತ ದೂರದರ್ಶನದ ಎಲ್ಲಾ ಚಾನಲ್‌ಗಳಲ್ಲಿ ನೇರಪ್ರಸಾರವನ್ನು ಮಾಡಲಾಗುತ್ತದೆ.