Sunday, June 8, 2025

ಉಡುಪಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಒಂದೇ ದಿನ 1392 ಮಂದಿಗೆ ಸೋಂಕು ದೃಢ

ಉಡುಪಿ: ಉಡುಪಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 1392 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 89,899 ಕ್ಕೆ ಏರಿಕೆಯಾಗಿದೆ.


ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 499 ಕೊರೊನಾದಿಂದ ಗುಣಮುಖರಾಗಿದ್ದು, ಈವರೆಗೆ 82,737 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ವರದಿಯಾಗಿದೆ. ಸದ್ಯ 6662 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಸೋಂಕಿನಿಂದಾಗಿ ಜಿಲ್ಲೆಯಲ್ಲಿ ನಿನ್ನೆ ಓರ್ವರು ಸಾವನ್ನಪ್ಪಿದ್ದಾರೆ.


ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲಾದ 1392 ಕೋವಿಡ್ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿ ತಾಲೂಕಿನಲ್ಲ 690, ಕುಂದಾಪುರದಲ್ಲಿ 363, ಕಾರ್ಕಳದಲ್ಲಿ 337 ಹಾಗೂ ಹೊರ ಜಿಲ್ಲೆಯ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ದಿನನಿತ್ಯದ ಪಾಸಿಟಿವಿಟಿ ದರ ಶೇ.24.87ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles