Sunday, June 8, 2025

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ: ಒಂದೇ ದಿನ 48,905 ಮಂದಿಗೆ ಪಾಸಿಟಿವ್: 39 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ನ ಹಾವಳಿ ದಿನಂಪ್ರತಿ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 48,905 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಕರ್ನಾಟಕದಲ್ಲಿ ಈವರೆಗೆ ಸೋಂಕು ತಗುಲಿರುವವರ ಸಂಖ್ಯೆ 36,54,413ಕ್ಕೆ ಏರಿಕೆಯಾಗಿದೆ.


ರಾಜ್ಯದಲ್ಲಿ ಒಂದೇ ದಿನ 39 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸೋಂಕಿನಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ 38,705 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41699 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 32,57,769 ಕ್ಕೆ ಏರಿಕೆಯಾಗಿದೆ. ಇನ್ನು, ರಾಜ್ಯದಲ್ಲಿ ಸದ್ಯ 3,57,909ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.22.51ರಷ್ಟಿದೆ.


ರಾಜ್ಯದಲ್ಲಿ ಹೊಸದಾಗಿ ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ, ಬೆಂಗಳೂರಿನಲ್ಲಿ 22,427, ಬಳ್ಳಾರಿಯಲ್ಲಿ 1,141, ದಕ್ಷಿಣ ಕನ್ನಡದಲ್ಲಿ 888, ಧಾರವಾಡದಲ್ಲಿ 1,523, ಹಾಸನದಲ್ಲಿ 2,016, ಕಲಬುರಗಿಯಲ್ಲಿ 1,007, ಕೋಲಾರದಲ್ಲಿ 1,547, ಮಂಡ್ಯದಲ್ಲಿ 2,186, ಮೈಸೂರಿನಲ್ಲಿ 2,797, ತುಮಕೂರಿನಲ್ಲಿ 2,645, ಉಡುಪಿಯಲ್ಲಿ 1,392 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 48,905 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles