ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಪ್ರತಿನಿತ್ಯ ಏರಿಳಿತ ಉಂಟಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,86,384 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4,03,71,500 ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 573 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಸೋಂಕಿನಿಂದ ಸಾವ್ನಪ್ಪಿರುವವರ ಸಂಖ್ಯೆ 4,91,729ಕ್ಕೆ ಏರಿಕೆಯಾಗಿದೆ. ಇನ್ನು, ದೇಶದಲ್ಲಿ ಒಂದೇ ದಿನ 3,06,357 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3,76,77,328 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 22,02,472 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.19.59ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.