Sunday, June 8, 2025

21,990 ರೂ. ಗೆ ಆಕರ್ಷಕ ಸ್ಮಾರ್ಟ್​ಫೋನ್ ಲಾಂಚ್ ಮಾಡಿದ ವಿವೋ

ಪ್ರಸಿದ್ಧ ಸ್ಮಾರ್ಟ್​ಫೋನ್ ಕಂಪನಿಯಾದ ವಿವೋ ವು ಭಾರತೀಯ ಮಾರುಕಟ್ಟೆಯಲ್ಲಿ ಒಂದಾದ ಮೇಲೊಂದು ಹೊಸ ಮಾದರಿಯ ಸ್ಮಾರ್ಟ್​ಫೋನ್ ಗಳನ್ನು ಲಾಂಚ್ ಮಾಡುತ್ತಿದೆ. ಈಗಾಗಲೇ 3, 4 ಹೊಸ ಸ್ಮಾರ್ಟ್​ಫೋನ್ ಗಳನ್ನು ಬಿಡುಗಡೆ ಮಾಡಿದ್ದು, ಇದೀಗ ತನ್ನ ಹೊಸ ವಿವೋ ವೈ75 5ಜಿ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ.

ವಿವೋ ವೈ75 5ಜಿ ಸ್ಮಾರ್ಟ್‌ಫೋನ್‌ 5,000mAh ನ ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗೂ ಟ್ರಿಪಲ್ ರಿಯಲ್ ಕ್ಯಾಮೆರಾವನ್ನು ಹೊಂದಿದ್ದು, ಇದರಲ್ಲಿನ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹಾಗೂ ಸೆಲ್ಫಿ ಕ್ಯಾಮೆರಾವು 16 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ನ ಬೆಂಬಲವನ್ನು ಪಡೆದಿದೆ.

ಈ ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. 8GB RAM ಮತ್ತು 128GB ಇಂಟರ್ ನಲ್ ಸ್ಟೊರೇಜ್ ಅನ್ನು ಹೊಂದಿದೆ. ಭಾರತದಲ್ಲಿ ವಿವೋ Y75 5G ಸ್ಮಾರ್ಟ್‌ಫೋನ್‌ ಗೆ 21,990 ರೂ. ನಿಗದಿ ಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಇ-ಸ್ಟೋರ್  ಹಾಗೂ ಪಾಲುದಾರ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಲು ಲಭ್ಯವಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles