ಬೆಂಗಳೂರು: ಪ್ರಜ್ವಲ್ ದೇವರಾಜ್ ವೀರಂ, ಅಬ್ಬರ, ಮಾಫಿಯಾ ಹೀಗೇ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಮಾಫಿಯಾ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಈ ಟೀಸರ್ ಮೂಲಕ ಚಿತ್ರದ ನಿರೀಕ್ಷೆ ಹೆಚ್ಚಾಗಿದೆ.
ಮಾಫಿಯಾ ಚಿತ್ರವು ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಈ ಎಲ್ಲಾ ಭಾಷೆಗಳಲ್ಲಿ ಏಕಕಾಲಕ್ಕೆ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ಆಡಿಯೋ ಹಕ್ಕನ್ನು ಆನಂದ್ ಆಡಿಯೋ ಖರೀದಿ ಮಾಡಿದೆ.
ಪ್ರಜ್ವಲ್ ದೇವರಾಜ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದು, ದೇವರಾಜ್ ಹಾಗೂ ಸಾಧುಕೋಕಿಲ ಅವರ ತಾರಾಬಳಗವಿದೆ. ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಅವರು ನಿರ್ಮಿಸುತ್ತಿದ್ದಾರೆ. ಲೋಹಿತ್ ಅವರ ನಿರ್ದೇಶನ, ತರುಣ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಅವರು ಸಂಭಾಷಣೆ ಬರೆದಿದ್ದಾರೆ.