Sunday, June 8, 2025

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.35 ಲಕ್ಷ ಪಾಸಿಟಿವ್ ಪ್ರಕರಣ ಪತ್ತೆ: 871ಮಂದಿ ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕಳೆದ 24ಗಂಟೆಗಳಲ್ಲಿ ಹೊಸದಾಗಿ 2,35,532 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 4,08,58,241 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 871ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟು, ಈವರೆಗೆ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 4,93,218 ಏರಿಕೆಯಾಗಿದೆ. ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3,35,939 ಮಂದಿ ಕೊರೊನಾ ಸೋಂಕಿನಿಂದಾಗಿ ಚೇತರಿಸಿಕೊಂಡಿದ್ದು, ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3,83,60,710 ಏರಿಕೆಯಾಗಿದೆ.

ಇನ್ನು, ಸದ್ಯ ದೇಶದಲ್ಲಿ 20,04,333 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.13.39ರಷ್ಟಿದೆ. ದೇಶದಲ್ಲಿ ಈವರೆಗೆ ಒಟ್ಟು 1,65,04,87,260 ಮಂದಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles