ನವದೆಹಲಿ: ಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್, ಮೈನಿಂಗ್ ಮೇಟ್‌ನ 41 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಿಎ, ಐಸಿಡಬ್ಲ್ಯೂಎ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜನವರಿ 27 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 16 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟ್ರೇಡ್ ಟೆಸ್ಟ್, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾರ್ಖಂಡ್‌ನ ಈಸ್ಟ್ ಸಿಂಗ್‌ಭುಮ್‌ನಲ್ಲಿ ಉದ್ಯೋಗ ನೀಡಲಾಗುತ್ತದೆ.
ಇನ್ನು, ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ ಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಪಿ.ಒ.ಜಡುಗಡ ಮೈನ್ಸ್, ಸಿಂಗ್ಭುಮ್ ಈಸ್ಟ್ ಜಾರ್ಖಂಡ್-832102 ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಪ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ www.ucil.gov.in ಗೆ ಭೇಟಿ ನೀಡಬಹುದಾಗಿದೆ.