ಉಡುಪಿ: ರಾಜ್ಯದ ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ. ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 441 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 92685ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 1,108ಮಂದಿ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಂಡಿದ್ದಾರೆ. ಆ ಮೂಲಕ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 87203ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 507ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದು, ಉಡುಪಿಯಲ್ಲಿ ಸದ್ಯ 4,975ಸಕ್ರಿಯ ಪ್ರಕರಣಗಳಿವೆ