ದಕ್ಷಿಣ ಕನ್ನಡ ಜಿಲ್ಲೆಯ 17 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 79 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ನೇಮಕ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಕನಿಷ್ಠ 18 ರಿಂದ ಗರಿಷ್ಠ 35 ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ವೇತನ 5,000 ರೂಪಾಯಿ ಆಗಿದೆ. ಕಾರ್ಯಕರ್ತೆಯರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು ಹಾಗೂ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ತಹಶೀಲ್ದಾರರು ಅಥವಾ ಉಪತಹಶೀಲ್ದಾರರಿಂದ ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ಗಳನ್ನು ನೀಡಬೇಕು.