ನವದೆಹಲಿ: ಭಾರತದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,61,386ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4,16,30,885 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24ಗಂಟೆಗಳಲ್ಲಿ 1,733ಮಂದಿ ಕೊರೊನಾ ಸೋಂಕಿನಿಂದಾಗಿ ಸಾವಿಗೀಡಾಗಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 4,97,996ಕ್ಕೆ ಏರಿಕೆಯಾಗಿದೆ. ಇನ್ನು, ಒಂದೇ ದಿನ 2,81,109ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,95,11,307 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್ ಶೇಕಡ 9.26ರಷ್ಟಿದೆ.