Sunday, June 8, 2025

ಉಡುಪಿ: ಕಳೆದ 24 ಗಂಟೆಗಳಲ್ಲಿ 542ಮಂದಿಗೆ ಕೊರೊನಾ ಪಾಸಿಟಿವ್: ಮೂವರು ಸೋಂಕಿಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ ಹೊಸದಾಗಿ 542 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಉಡುಪಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93,794ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಜಿಲ್ಲೆಯಲ್ಲಿ ಒಂದೇ ದಿನ 972ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 89,997ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 3ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 516ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 3,339 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದ್ದು, ಸದ್ಯ 3,281 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ದರ ಶೇ.16.1ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles