ನವದೆಹಲಿ:ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ರಮವಾಗಿ ಇಳಿಕೆಯನ್ನು ಕಂಡಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಇಂದು ಕೊಂಚ ಏರಿಕೆಯನ್ನು ಕಂಡಿದೆ. ಕಳೆದ 24 ಗಂಟೆಗಳಲ್ಲಿ 1,72,433 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4,18,03,318ಕ್ಕೆ ಏರಿಕೆಯಾಗಿದೆ.
ಇನ್ನು, ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1,008ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ, ಆ ಮೂಲಕ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 4,98,987ಕ್ಕೆ ಏರಿಕೆಯಾಗಿದೆ. ಒಂದೇ ದಿನ 2,59,107 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,97,70,414 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 15,33,291 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.10.99ರಷ್ಟಿದೆ. ನಿನ್ನೆಗೆ ಹೋಲಿಸಿದರೆ ಇಂದು ಹೊಸದಾಗಿ ಪತ್ತೆಯಾದ ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಶೇ.6.8ರಷ್ಟು ಹೆಚ್ಚಾಗಿದೆ.