ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 16,436ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 60ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 44,819 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 36,72,744 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 38,60,774 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಈವರೆಗೆ 39,197 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 1,48,800 ಸಕ್ರಿಯ ಪ್ರಕರಣಗಳಿವೆ.