ನವದೆಹಲಿ: ದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಕಳೆದ 24 ಗಂಟೆಗಳಲ್ಲಿ 1,49,394 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಂದೇ ದಿನ 1,072 ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದು, ಆ ಮೂಲಕ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 5,00,087ಕ್ಕೆ ಏರಿಕೆಯಾಗಿದೆ. ಇನ್ನು, ಕಳೆದ 24ಗಂಟೆಗಳಲ್ಲಿ 2,46,674ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಈವೆರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,00,17,088ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 14,35,569 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.9.27ರಷ್ಟಿದೆ. ನಿನ್ನೆಗೆ ಹೋಲಿಸಿದರೆ ಇಂದಿನ ಕೋವಿಡ್ ಪಾಸಿಟಿವ್ ಪ್ರಕರಣ ಶೇ.13ರಷ್ಟು ಕಡಿಮೆ ಪ್ರಮಾಣದಲ್ಲಿದೆ.