ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಫೆ.3 ಗುರುವಾರ ಸಂಜೆ ಊರ್ವಾದ ಚಿಲಿಂಬಿ-ಮಠದಕಣಿ ಕ್ರಾಸ್ ರಸ್ತೆಯಲ್ಲಿ ನಡೆದಿದೆ. https://youtu.be/1YKfenJNqYM
ವಿವೇಕಾನಂದ ಶೆಣೈ(60) ಎಂಬುವವರು ಚಲಾಯಿಸುತ್ತಿದ್ದ ವೇಳೆ ಕಾರಿನ ಬ್ರೇಕ್ ಪೆಡಲ್‌ಗೆ ನೀರಿನ ಬಾಟಲ್ ಸಿಲುಕಿದ ಪರಿಣಾಮ ಕಾರು ವೇಗವಾಗಿ ಚಲಿಸಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಘಟನೆಯಲ್ಲಿ ಎರಡು ಕಾರು ಹಾಗೂ ದ್ವಿಚಕ್ರವಾಹನ ಜಖಂ ಆಗಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನ ವಿರುದ್ಧ ಮಂಗಳೂರಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.