Sunday, June 8, 2025

ಥಿಯೇಟರ್, ಜಿಮ್, ಈಜುಕೊಳಗಳಿಗೆ ಶೇ.100 ಜನರಿಗೆ ಅವಕಾಶ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆ ಸಿನಿಮಾ ಮಂದಿರಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ನಿಯಮ ಫೆಬ್ರವರಿ 5 ರಿಂದಲೇ ಜಾರಿಯಾಗಲಿದೆ.


ಚಲನ ಚಿತ್ರ ವಾಣಿಜ್ಯ ಮಂಡಳಿ ಹಾಗೂ ಚಿತ್ರೋದ್ಯಮದ ಗಣ್ಯರ ಜೊತೆ ಮಾತುಕತೆ ನಡೆಸಿದ ಬಳಿಕ ಆರೋಗ್ಯ ಸಚಿವ ಕೆ.ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.


ಸಿನಿಮಾ ಮಂದಿರಕ್ಕೆ ಹೋಗುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆಯನ್ನು ಪಡೆದುಕೊಂಡಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಥಿಯೇಟರ್‌ನ ಒಳಗೆ ತಿಂಡಿ ತಿನಿಸು ತರುವುದನ್ನು ನಿಷೇಧಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವಾಗ ಬೇಕಾದರೂ ತಪಾಸಣೆ ನಡೆಸಬಹುದು ಎಂದರು. ಇನ್ನು, ಜಿಮ್ ಮತ್ತು ಈಜುಕೊಳಗಳಿಗೂ ಕೂಡ ಪೂರ್ಣ ಪ್ರಮಾಣದಲ್ಲಿ ಅನುಮತಿ ನೀಡಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles