ಶ್ರೀನಗರ: ಶ್ರೀನಗರದ ಜಕುರಾ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಭಾರತೀಯ ಸೇನಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೋಯ್ಬಾದ ಮತ್ತೊಂದು ಅಂಗವಾದ ಟಿಆರ್‌ಎಫ್‌ನ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನಿಡಿದ್ದಾರೆ.
ಕಾರ್ಯಾಚರಣೆಯ ಸ್ಥಳದಿಂದ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಇಖ್ಲಾಕ್ ಹಜಂ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗೆ ಅನಂತ್‌ನಾಗ್‌ನ ಹಸನ್‌ಪೋರಾದಲ್ಲಿ ನಡೆದ ಹೆಡ್‌ಕಾನ್ಸ್ ಟೇಬಲ್ ಅಲಿ ಮೊಹಮ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


