ಮುಂಬೈ: ಕೋವಿಡ್ ಸೋಂಕಿನಿಂದಾಗಿ ಜನವರಿ 8 ರಂದು ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿದ್ದರು. ಕೆಲ ದಿನಗಳ ನಂತರ ಇವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿತ್ತು. ಆದರೆ ಇಂದು ಮತ್ತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಲತಾ ಮಂಗೇಶ್ಕರ್ ಅವರು ಈ ಹಿಂದೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದರು. ಕೆಲದಿನಗಳ ಹಿಂದಷ್ಟೇ ಆರೋಗ್ಯ ಸ್ಥಿತಿ ಸುಧಾರಿಸಿ ವೆಂಟಿಲೇರ್ ತೆರವುಗೊಳಿಸಲಾಗಿತ್ತು. ಆದರೆ ಇಂದು ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಮತ್ತೆ ವೆಂಟಿಲೇಟರ್ ನೆರವು ನೀಡಲಾಗಿದೆ.