Friday, June 20, 2025

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಮುಂಬೈ: ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಕೆಲ ದಿನಗಳಿಂದ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಲತಾ ಮಂಗೇಶ್ಕರ್ ಅವರನ್ನು ಜನವರಿ 8 ರಂದು ಕೋವಿಡ್ ಪಾಸಿಟಿವ್ ನಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಲದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿತ್ತು. ಆದರೆ ನಿನ್ನೆ ಅವರ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಮತ್ತೆ ವೆಂಟಿಲೇಟರ್ ಅನ್ನು ಅಳವಡಿಸಲಾಗಿತ್ತು. ಆದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಲತಾ ಮಂಗೇಶ್ಕರ್ ಅವರು ಸುಮಾರು ಏಳು ದಶಕಗಳ ಕಾಲ ಸಂಗೀತ ಪ್ರಿಯರನ್ನು ರಂಜಿಸಿದ್ದಾರೆ. ಇವರಿಗೆ ಭಾರತರತ್ನ, ಪದ್ಮವಿಭೂಷಣ, ಪದ್ಮಭೂಷಣ, ದಾದಾಸಾಹೇಬ್ ಪಾಲ್ಕೆ ಹಾಗೂ ಇನ್ನಿತರ ಪ್ರಶಸ್ತಿಗಳು ದೊರೆತಿವೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles