ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ನಡೆದ ಅಪಘಾತದಲ್ಲಿಕುಂದಾಪುರ ಮೂಲದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಸುಕಿನ ಜಾವ ನಡೆದಿದೆ.
ಒಂದೇ ಕುಟುಂಬದ ಆರು ಮಂದಿ ಸದಸ್ಯರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಗೀತಾ(32ವ), ಶಾರದ(60ವ) ಮತ್ತು ದೃತಿ(5ವ) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಗೇಶ್(65ವ), ದಯಾನಂದ (66ವ), ಸುಧೀಂದ್ರ(35ವ) ಎಂಬುವವರು ಗಾಯಗೊಂಡಿದ್ದು,ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.