Sunday, June 8, 2025

ಭಾರತದಲ್ಲಿ ಕೊರೊನಾ ಪಾಸಿಟಿವ್ ಕೇಸ್‌ ಗಣನೀಯ ಇಳಿಕೆ:ಒಂದೇ ದಿನ 83,876ಹೊಸ ಕೇಸ್‌ ಪತ್ತೆ

ನವದೆಹಲಿ: ಭಾರತದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ಗಣನೀಯ ಇಳಿಕೆ ಕಂಡಿದೆ. ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 83,876 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 895ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಆ ಮೂಲಕ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 5,02,905 ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,99,054ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,06,60,202ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಸದ್ಯ 11,08,938 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್‌ ಶೇ.7.25ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles