Sunday, June 8, 2025

ರಾಜ್ಯದಲ್ಲಿ ಗಣನೀಯ ಇಳಿಕೆಯತ್ತ ಕೊರೊನಾ ಪಾಸಿಟಿವ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 6,151 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಂದೇ ದಿನ 16,802ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಒಂದೇ ದಿನ 49 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ 39,02,309 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, 37,75,799 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 39,396 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ರಾಜ್ಯದಲ್ಲಿ 87,080 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ ದೈನಂದಿನ ಪಾಸಿಟಿವಿಟಿ ದರ ಶೇ.6.19ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles